ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಾವಲು ವಾಹನವಾಗಿ ಹೋಗಿದ್ದ ಚಿಕ್ಕಮಗಳೂರಿನ ಡಿ.ಆರ್.ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದ ಘಟನೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ನಡೆದಿದೆ.
ಸಿಎಂ ಯಡಿಯೂರಪ್ಪ ಅವರು ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಗುರುವಾರ ಭಾಗವಹಿಸಿದ್ದರು. ಈ ಹಿನ್ನೆಲೆ ಬಂದೋಬಸ್ತ್ ಗಾಗಿ ಚಿಕ್ಕಮಗಳೂರಿನಿಂದ ಪೊಲೀಸರು ಹಾಗೂ ಡಿ.ಆರ್.ವಾಹನ ಹೋಗಿತ್ತು. ಸಿಎಂ ಯಡಿಯೂರಪ್ಪ ಅವರು ನಿನ್ನೆಯೇ ಬೆಂಗಳೂರಿಗೆ ಹಿಂದಿರುಗಿದ್ದರು. ಆದರೆ ಡಿ.ಆರ್.ಕಾರ್ಯಕ್ರಮ ಮುಗಿಸಿ ವಾಹನ ಇಂದು ಚಿಕ್ಕಮಗಳೂರಿಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ.
ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ಬರುತ್ತಿದ್ದಂತೆ ಜೀಪಿನ ಬ್ರೇಕ್ ಜಾಮ್ ಆದ ಪರಿಣಾಮ ಜೀಪ್ ಪಲ್ಟಿಯಾಗಿದೆ. ಜೀಪ್ ಚಾಲಕ ಶರತ್‍ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಉಳಿದ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ.
PublicNext
06/11/2020 08:36 pm