ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋಕಾಕ್ ಬಳಿ ಟಾಟಾ ಏಸ್- ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಟಾಟಾ ಏಸ್ ಹಾಗೂ ಇಂಡಿಕಾ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದ ಘಟನೆ ಗೋಕಾಕ್ ತಾಲೂಕಿನ ಮಮದಾಪುರ ಕ್ರಾಸ್‌ ಬಳಿ ನಡೆದಿದೆ.

ಮೃತರೆಲ್ಲರೂ ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಹನುಮಂತ ಪರಕನಟ್ಟಿ ಸೇರಿ ಇಬ್ಬರು ಮಹಿಳೆಯರು ಹಾಗೂ ನಾಲ್ಕು ವರ್ಷದ ಬಾಲಕಿ ಮೃತ ದುರ್ದೈವಿಗಳು. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಟಾಟಾ ಏಸ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ‌ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Vijay Kumar
PublicNext

PublicNext

15/11/2020 07:16 pm

Cinque Terre

107.49 K

Cinque Terre

7

ಸಂಬಂಧಿತ ಸುದ್ದಿ