ಲಕ್ನೋ: ಬೊಲೆರೋ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಕ್ಕಳು ಸೇರಿದಂತೆ 14 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ನಡೆದಿದೆ.
ಈ ಭೀಕರ ಅಪಘಾತವು ಮಣಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರಯಾಗ್ ರಾಜ್-ಲಕ್ನೋ ಹೆದ್ದಾರಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬೊಲೆರೋದಲ್ಲಿದ್ದವರು ನಬಬ್ ಗಂಜ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತ ಸ್ಥಳಕ್ಕೆ ದಾವಿಸಿ ಸಾಧ್ಯವಿರುವ ಎಲ್ಲ ಸಹಾಯಗಳನ್ನು ನೀಡುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
PublicNext
20/11/2020 09:01 am