ಶ್ರೀನಗರ : ಕಣಿವೆ ರಾಜ್ಯದಲ್ಲಿ ಉಗ್ರರರ ಗುಂಡಿನ ದಾಳಿಗೆ ಭಾರತೀಯ ಸೇನೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
2008ರ ನವೆಂಬರ್ 26ರಂದು ಉಗ್ರರು ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದರು.
ಈ ಉಗ್ರ ದಾಳಿ ನಡೆದು ಇಂದಿಗೆ 12 ವರ್ಷಗಳಾದ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ತಂಡದ ಮೇಲೆ ಮೂವರು ಉಗ್ರರ ತಂಡ ಏಕಾಏಕಿ ದಾಳಿ ನಡೆಸಿತ್ತು. ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದರು ಪ್ರಯೋಜನವಾಗಿಲ್ಲ.
ಸದ್ಯ ಗುಂಡಿನ ದಾಳಿ ನಡೆದ ಜಾಗವನ್ನು ಭಾರತೀಯ ಸೇನೆ ಸುತ್ತುವರೆದಿದ್ದು ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
PublicNext
26/11/2020 05:20 pm