ತಿರುವನಂತಪುರಂ: ಕೆಎಸ್ ಆರ್ ಟಿಸಿ ಬಸ್ಸೊಂದು ಬೃಹತ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಕೊಚ್ಚಿಯ ಚಕ್ಕರಪರಂಬು ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮೃತ ಚಾಲಕನನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಸ್ ತಿರುವನಂತಪುರಂನಿಂದ ಕೋಯಿಕ್ಕೋಡ್ ಕಡೆ ತೆರಳುತ್ತಿತ್ತು ಎಂದು ಕೆಎಸ್ ಆರ್ ಟಿಸಿ ಮೂಲಗಳು ತಿಳಿಸಿವೆ.
ವೈಟಿಲ್ಲಾ ಸಾರಿಗೆ ಕೇಂದ್ರದಿಂದ 2 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ದುರಂತಕ್ಕೂ 5-10 ನಿಮಿಷಗಳ ಕಾಲ ಬ್ರೇಕ್ ತೆಗೆದುಕೊಳ್ಳಲಾಗಿತ್ತು.
ಹೀಗೆ ಬ್ರೇಕ್ ತೆಗೆದುಕೊಂಡ ಬಳಿಕ ಚಲಿಸಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಮರವೊಂದಕ್ಕೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
PublicNext
30/11/2020 09:16 am