ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ ಮೇಲೆ ಎರಗಿದ ಟ್ರಕ್ : 8 ಮಂದಿ ದುರ್ಮರಣ

ಲಕ್ನೋ : ಮರಳು ತುಂಬಿದ್ದ ಟ್ರಕ್ ವೊಂದು ನಿಂತಿದ್ದ ಮಹಿಂದ್ರಾ ಸ್ಕಾರ್ಪಿಯೊ ಮೇಲೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ.

ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದವರು ಮಸಣ ಸೇರಿದ್ದಾರೆ.

ದೇವಿಗಂಜ್ ನಲ್ಲಿ ತಮ್ಮ ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಶಹಜಾದ್ ಪುರಕ್ಕೆ ಹಿಂತಿರುಗುತ್ತಿದ್ದಾಗ ಕಾಡಾಧಾಮ್ ಪ್ರದೇಶದಲ್ಲಿ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರ ದೇಹಗಳು ಅಪ್ಪಚ್ಚಿಯಾಗಿದ್ದು, ಗ್ಯಾಸ್ ಕಟರ್ ಬಳಸಿ ದೇಹಗಳನ್ನು ಹೊರತೆಗೆಯಬೇಕಾಯಿತು ಎಂದು ಎಸ್ಪಿ ಅಭಿನಂದನ್ ತಿಳಿಸಿದ್ದಾರೆ.

ಕಾರಿನಲ್ಲಿದ ಇಬ್ಬರು ಯುವತಿಯರು ಕಿಟಕಿ ಗಾಜು ಹೊಡೆದು ಹೊರಬರುವಲ್ಲಿ ಯಶಸ್ವಿಯಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅ

ಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸತ್ತವರ ಕುಟುಂಬಕ್ಕೆ ಆಗತ್ಯ ನೆರವು ನೀಡುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

Edited By : Nirmala Aralikatti
PublicNext

PublicNext

02/12/2020 12:38 pm

Cinque Terre

56.51 K

Cinque Terre

4