ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದೋನ್ನತಿ ಸಿಕ್ಕ ದಿನವೇ ಅಪಘಾತದಲ್ಲಿ ಬಲಿಯಾದ ಎ ಎಸ್ ಐ

ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್‍ಐ ಆಗಿ ಪದೋನ್ನತಿ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.

ಸಿದ್ದರಾಮಪ್ಪ(48) ಮೃತ ದುರ್ದೈವಿ. ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ, ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು. ನಿನ್ನೆ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುವಾಗ ತಾಲೂಕಿನ ಹಿರೇಗೌಜ ಬಳಿ ಕಾರು-ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.

ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ನಿವಾಸಿಯಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಇಂದು ಎಎಸ್‍ಐ ಆಗಿ ಬಡ್ತಿ ಪಡೆಯುತ್ತಿದ್ದರು. ಪ್ರಮೋಷನ್ ಸಿಕ್ಕ ಖುಷಿಯಲ್ಲಿ ಎಎಸ್‍ಐ ಸಮವಸ್ತ್ರ ಕೂಡ ಸಿದ್ಧಮಾಡಿಕೊಂಡಿದ್ದರು. ಸಿದ್ರಾಮಪ್ಪ ಅವರ ಅಕಾಲಿಕ ಸಾವಿಗೆ ಇಲಾಖೆ ಸಿಬ್ಬಂದಿ ಹಾಗೂ ಕುಟುಂಬಸ್ಥರು ಶೋಕತಪ್ತರಾಗಿದ್ದಾರೆ.

Edited By : Nagaraj Tulugeri
PublicNext

PublicNext

03/12/2020 09:55 am

Cinque Terre

106.79 K

Cinque Terre

11