ಹಾವೇರಿ : ಇತ್ತೀಚ್ಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಷ್ಟೇ ಜಾಗೃತ ವಹಿಸಿದರೂ ಕೂಡಾ ಕೆಲವು ಅನಿರೀಕ್ಷಿತ ಘಟನೆಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ.
ನಿಂತಿದ್ದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾಗಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಣೇಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ 4ರ ಕಮದೋಡ ಪೆಟ್ರೋಲ್ ಬಂಕ್ ಬಳಿ ಡಿ.4 ರಂದು ನಡೆದಿದೆ.
ಹನುಮಂತಪ್ಪ (65), ಗೀತಾ (55) ಮತ್ತು ಶಿವಾನಿ (10) ಮೃತರು. ಗಾಯಾಳು ರೇಣುಕಾರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ನಿವಾಸಿಗಳು.
ಮದುವೆಗೆಂದು ಹುಬ್ಬಳ್ಳಿಗೆ ಹೋಗಿ ಹರಿಹರಕ್ಕೆ ಮರಳಿ ಬರುವಾಗ ಅಪಘಾತ ಸಂಭವಿಸಿದೆ.
ಕಾರು ಚಾಲಕನ ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
05/12/2020 09:34 am