ಬಳ್ಳಾರಿ: ಎರಡು ಬೈಕ್ ಗಳಮಧ್ಯೆ ನಡೆದ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಾಣದಗೆರೆ ಕ್ರಾಸ್ ಬಳಿ ಘಟನೆ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ಯುವಕ ಸುಮಾರು 25 ವರ್ಷದ ಯುವಕನಾಗಿದ್ದು, ತಲೆಗೆ ತೀವ್ರ ಪೆಟ್ಟುಬಿದ್ದು ರಕ್ತಸಾವ್ರವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆಂದು ಹೇಳಲಾಗಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
PublicNext
08/12/2020 11:12 am