ಹಾವೇರಿ: ಧರ್ಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆ ತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರನ್ನು ಬಸವರಾಜ್ ಕುಂದೂರ(22) ಮತ್ತು ತಾಯಿ ಚನ್ನವ್ವ ಕುಂದೂರ (45) ಎಂದು ಗುರುತಿಸಲಾಗಿದೆ. ಕಂಚಿನೆಗಳೂರು ಗ್ರಾಮದಿಂದ ಕಾಡಶೆಟ್ಟಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ನೀರು ಪಾಲಾದ ತಾಯಿ ಮಗನಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಕಾರ್ಯಚರಣೆ ವೇಳೆ ನದಿ ನೀರಿನಲ್ಲಿ ಬೈಕ್ ಪತ್ತೆಯಾಗಿದೆ. ಆದರೆ ತಾಯಿ ಮಗ ಮಾತ್ರ ಇನ್ನೂ ಸಿಕ್ಕಿಲ್ಲ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
09/12/2020 02:57 pm