ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ: ಪ್ರಧಾನಿ ಸಂತಾಪ

ಜೈಪುರ: ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ.

ಸದ್ಯ ರಾಜಸ್ಥಾನದ ಚಿತ್ತೋರ್ ಗಢ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿದ್ದಾಋಎ.

ಸುಧಾಲ್ಖೇರಾ ಬಳಿಯ ಉದಯ್ ಪುರ್-ನಿಂಬಾಹೇರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಕೆಲ ಸಮಯದ ಬಳಿಕ ಅಸುನೀಗಿದ್ದಾರೆ.

ಗಂಭೀರವಾಗಿ ಗಾಯಗೊಂಡು 9 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಚಿತ್ತೋರ್ ಗಢ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಭಾರ್ಗವ್ ಸ್ಪಷ್ಟಪಡಿಸಿದ್ದಾರೆ.

ಅಪಘಾತದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿತ್ತೋರ್ ಗಢದ ನಿಕುಂಭ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕೆಲವರು ಪ್ರಾಣ ಕಳೆದುಕೊಂಡಿರುವ ಬಗ್ಗೆ ನನಗೆ ನೋವಿದೆ.

ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬದ ಜತೆ ಇವೆ.

ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆಂದು ಪ್ರಧಾನಿ ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

13/12/2020 08:08 am

Cinque Terre

63.96 K

Cinque Terre

2

ಸಂಬಂಧಿತ ಸುದ್ದಿ