ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ಕಟ್ಟಡ ದುರಂತ : ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸೋಮವಾರ ಮೂರು ಅಂತಸ್ತಿನ ಕಟ್ಟಡ ಕುಸಿತದಿಂದಾಗಿ ಸ್ಥಳದಲ್ಲೇ ಎಂಟು ಜನ ಸಾವನಪ್ಪಿದ್ದರು, ಸ್ಥಳೀಯರೇ ಕಟ್ಟಡಗಳಡಿ ಸಿಲುಕಿದ್ದ ಕನಿಷ್ಠ 20 ಕಾರ್ಮಿಕರನ್ನು ರಕ್ಷಿಸಿದ್ದರು.

ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಇಂದು ಕೂಡಾ ಕಟ್ಟಡದ ಅವಶೇಷಗಳಡಿ ಸಿಲುಕಿದವರ ರಕ್ಷಣೆ ಕಾರ್ಯ ಮುಂದುವರೆದಿದ್ದು ಇನ್ನೂ 26ಕ್ಕಿಂತ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಹಾಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ಭಿವಾಂಡಿ-ನಿಜಾಂಪುರ್ ಮುನ್ಸಿಪಲ್ ಕಾರ್ಪೋರೇಷನ್ ಕಮಿಷನರ್ ಪಂಕಜ್ ಆಶಿಯಾ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

22/09/2020 08:25 am

Cinque Terre

83.21 K

Cinque Terre

0

ಸಂಬಂಧಿತ ಸುದ್ದಿ