ಬೆಂಗಳೂರು : ಕನ್ನಡ ಸಾಹಿತ್ಯ ಕ್ಷೇತ್ರದ ಹಿರಿಯ ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್. ಆಮೂರ ಅವರು ಇಂದು ಮುಂಜಾನೆ ಬೆಂಗಳೂರಿನ ಸ್ವಗೃಹದಲ್ಲೇ ವಿಧಿವಶರಾಗಿದ್ದಾರೆ.
ಹಾವೇರಿ ಜಿಲ್ಲೆಯ ಬೊಮ್ಮನಹಳ್ಳಿ ಮೂಲದ ಜಿ.ಎಸ್.ಆಮೂರ ಅವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ, ಔರಂಗಾಬಾದ್ ನ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು ನಿವೃತ್ತಿ ನಂತರ ಕನ್ನಡ, ಇಂಗ್ಲಿಷ್ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಜಿ.ಎಸ್.ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕರ್ನಾಟಕ ರಾಜ್ಯಸರ್ಕಾರ ಪ್ರದಾನ ಮಾಡುವ, ಪಂಪ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಅವರಿಗೆ ಸಂದಿದ್ದವು.
ಪಂಪ ಪ್ರಶಸ್ತಿ ವಿಜೇತರಾದ ಇವರು ಕನ್ನಡ ಹಾಗೂ ಇಂಗ್ಲೀಷ್ ಸಾಹಿತ್ಯ ಪ್ರಾಕಾರಗಳಲ್ಲಿ ಪ್ರಕಾಂಡ ಪಂಡಿತರಾಗಿದ್ದು, ಕನ್ನಡ ಸಾಹಿತ್ಯವನ್ನು ಆಂಗ್ಲಭಾಷಾ ಓದುಗರಿಗೆ ಪರಿಚಯಿಸಿದ್ದಾರೆ. ದತ್ತಾತ್ರೇಯ ರಾಮಚಂದ್ರಬೇಂದ್ರೆ, ಪರ್ಸೆಷನ್ಸ್ ಆಫ್ ಮಾಡರ್ನ್ ಲಿಟರೇಚರ್, ಮನೋಹರ ಮಳಗಾಂವ್‌ಕರ್, ಆದ್ಯರಂಗಾಚಾಯ್, ದಿ ಕ್ರಿಟಿಕಲ್ ಸ್ಪೆಕ್ಟ್ರಮ್, ಮೊದಲಾದ ೧೪ ಕೃತಿಗಳ ಜೊತೆಗೆ ಕ್ರಿಟಿಕಲ್ ಎಸ್ಸೆಸ್ ಹ್ಯಾನ್ ಇಂಡಿಯನ್ ರೈಟಿಂಗ್ ಇನ್ ಇಂಗ್ಲಿಷ್, ಮುಂತಾದ ಆರು ಕೃತಿಗಳನ್ನೂ ಸಂಪಾದಿಸಿದ್ದಾರೆ. ಆಂಗ್ಲ ಭಾಷೆ ಹೇಳಿಕೊಡುವ ಭಾಷೆಯಾದರೆ, ಇವರ ಬರವಣಿಗೆ, ಕೃತಿರಚನೆಗಳೆಲ್ಲವೂ ಕನ್ನಡ ಭಾಷೆಯಲ್ಲೇ ಆಗಿತ್ತು.
PublicNext
28/09/2020 10:10 am