ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್(82) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್ (82) ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ, ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ, ನಂತರ ರಾಜಕೀಯ ದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಅವರ ಸರ್ಕಾರದ ಅವಧಿಯಲ್ಲಿ ಅವರು ಮಹತ್ವದ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ನಿಧನ ವಾರ್ತೆ ದುಃಖವನ್ನು ಉಂಟುಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.
PublicNext
27/09/2020 09:28 am