ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರ ಕಟ್ಟಡ ದುರಂತ : ಸತ್ತವರ ಸಂಖ್ಯೆ 33ಕ್ಕೆ ಏರಿಕೆ

ಥಾಣೆ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿನ ಕಟ್ಟಡ ದುರಂತದ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಇಲ್ಲಿಯವರೆಗೂ ಸಾವನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಸೆ. 21ರಂದು ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿತ ಕಂಡಿದೆ ಆ ವೇಳೆ ಸ್ಥಳದಲ್ಲಿಯೇ ಹಲವರು ಸಾವನ್ನಪ್ಪಿದ್ದರು.

ಸದ್ಯ ಅವಶೇಷದಡಿಯಲ್ಲಿ ಸಿಲುಕಿದವರನ್ನು ಹೊರತೆಗೆಯುವ ಕಾರ್ಯ ಮುಂದುವರೆದಿದೆ.

ಸದ್ಯ ಜನ 33 ಸಾವನಪ್ಪಿದ್ದು ಇನ್ನೂ ಹಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ.

ಇನ್ನೂ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆಯಿಂದ 10 ಕಿ.ಮೀ ದೂರದಲ್ಲಿರುವ ಭಿವಾಂಡಿ ಯ ಕಟ್ಟಡದಲ್ಲಿ 40 ಫ್ಲ್ಯಾ ಟ್ ಗಳಿದ್ದು, 150 ಮಂದಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

23/09/2020 11:46 am

Cinque Terre

63.38 K

Cinque Terre

0

ಸಂಬಂಧಿತ ಸುದ್ದಿ