ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಸ್ತೆ ದಾಬಸ್ ಪೇಟೆಯ ಅಂಚೆಮನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಹಳ್ಳಕ್ಕೆ ಬಿದ್ದಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಬಸ್ಸಿನಲ್ಲಿದ್ದ ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಾಬಸ್ ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಸಾಗಿಸಲಾಗಿದೆ.
ವರದಿ: ರಾಘವೇಂದ್ರ ದಾಸರಹಳ್ಳಿ
PublicNext
11/08/2022 06:45 pm