ಗದಗ: ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಘಟನೆ ಸಂಭವಿಸಿದೆ.
ರೋಣ ತಾಲೂಕಿನ ಮಾರನಬಸರಿ ಗ್ರಾಮದಿಂದ ಗದಗ ನಗರಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ ಚಾಲಕ ಸೇರಿ 20 ಪ್ರಯಾಣಿಕರು ಸೇಫ್ ಆಗಿದ್ದಾರೆ. ಪಾಟಾ ಪಿನ್ ಕಿತ್ತು ಜಕ್ಕಲಿ ಬಳಿ ಬಸ್ ನಿಯಂತ್ರಣ ಕಳೆದುಕೊಂಡಿದೆ. ಇದಕ್ಕೆ ಘಟಕದ ಮೆಕ್ಯಾನಿಕ್ ವಿಭಾಗದವರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಇನ್ನೂ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಸಣ್ಣಪುಟ್ಟ ಗಾಯವಾಗಿದ್ದ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.
PublicNext
09/09/2022 12:19 pm