ಮೈಸೂರು: ತಿಂಡಿ ತಿನ್ನಲು ಹೋಟೆಲ್ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಟರಾಜ್ ಅವರ ಪುತ್ರ ನಿತಿನ್(25) ಸಾವನ್ನಪ್ಪಿದ ನತದೃಷ್ಟ ವಿದ್ಯಾರ್ಥಿ. ಮೃತ ಯುವಕ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನಿತಿನ್ ತಿಂಡಿ ತಿನ್ನಲು ಸ್ನೇಹಿತನೊಂದಿಗೆ ಹುಣಸೂರು ಪಟ್ಟಣದ ಹೋಟೆಲ್‌ಗೆ ತೆರಳಿ ತಿಂಡಿಗೆ ಆರ್ಡರ್ ಮಾಡಿದ್ದಾರೆ. ಈ ವೇಳೆ ತಿಂಡಿ ಬರುವಷ್ಟರಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಆತನ ಸ್ನೇಹಿತರು ನಿತಿನ್‌ನನ್ನು ಉಪಚರಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಅಷ್ಟೊತ್ತಿಗಾಗಲೇ ನಿತಿನ್ ಪ್ರಾಣಪಕ್ಷಿ ಹಾರಿಹೋಗಿದೆ. ಈ ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
PublicNext
07/02/2022 07:26 pm