ಹೈದರಾಬಾದ್ : ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್ ಪ್ರೆಸ್ ರೈಲ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ರಾಜಧಾನಿ ಎಕ್ಸ್ ಪ್ರೆಸ್ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಸಾಗುವಾಗ ಈ ಅವಘಡ ಸಂಭವಿಸಿದೆ.
ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಎಂಜಿನ್ ಬದಲಾವಣೆ ಮಾಡಿಕೊಂಡು ರಾಜಧಾನಿ ಎಕ್ಸ್ ಪ್ರೆಸ್ ರೈಲು ತಡವಾಗಿ ಸಂಚರಿಸಿತು.
ಅದೃಷ್ಟ ಯಾವುದೇ ಅನಾಹುತಗಳು ಸಂಭವಿಸಿಲ್ಲ.
PublicNext
04/01/2021 08:05 am