ಚಿತ್ರದುರ್ಗ : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.
ಗಾಡಿಯಲ್ಲಿದ್ದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಭಿತ್(07) ಗಾಯಾಳುಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
07/01/2021 08:17 am