ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶುಗಳ ಸಾವು ಮಹಾರಾಷ್ಟ್ರದಲ್ಲಿ ಭೀಕರ ಘಟನೆ

ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಲ್ಲಿ 10 ನವಜಾತು ಶಿಶುಗಳು ಸಾವನಪ್ಪಿರುವ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ.

ನವಜಾತ ಶಿಶುಗಳಿದ್ದ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ವಾರ್ಡ್ ವ್ಯಾಪಿಸಿದ್ದು, ವಾರ್ಡ್ ನಲ್ಲಿದ್ದ 10 ಮಕ್ಕಳು ಕರಕಲಾಗಿವೆ.

ಬೆಂಕಿ ಗೋಚರವಾಗುತ್ತಿದ್ದಂತೆಯೇ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಅಲ್ಲದೆ ಶಿಶುಗಳನ್ನು ಬೇರೆಡೆ ರವಾನೆ ಮಾಡುವ ಕಾರ್ಯ ಮಾಡಿದರಾದರೂ, ಅಷ್ಟುಹೊತ್ತಿಗಾಗಲೇ ಬೆಂಕಿ ಕ್ಷಣಮಾತ್ರದಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿತು.

ಇನ್ನೂ ಸಿಬ್ಬಂದಿಗಳ ಹರಸಾಹಸದಿಂದಾಗಿ 7 ಮಕ್ಕಳನ್ನು ರಕ್ಷಿಸಲಾಗಿದೆ. ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಕಿ ಕಾಣಿಸಿಕೊಂಡುರಿವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಹೇಳಲಾಗುತ್ತಿದೆ.

Edited By : Nirmala Aralikatti
PublicNext

PublicNext

09/01/2021 08:40 am

Cinque Terre

106.56 K

Cinque Terre

7