ಮಹಾರಾಷ್ಟ್ರ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ನವಜಾತು ಶಿಶುಗಳು ಸಾವನಪ್ಪಿರುವೆ.
ಮಕ್ಕಳ ಸಜೀವ ದಹನವಾಗಿರುವ ಮನ ಕಲುಕುವ ಘಟನೆಗೆ ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ,ಮಹಾರಾಷ್ಟ್ರದ ಭಂಡಾರದಲ್ಲಿ ಹೃದಯ ಕದಡುವ ದುರಂತ ನಡೆದು ಹೋಗಿದೆ. ನಾವು ಅಮೂಲ್ಯವಾದ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. ಎಲ್ಲಾ ದುಃಖಿತ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
PublicNext
09/01/2021 11:24 am