ಬಳ್ಳಾರಿ: ಜಿಲ್ಲೆ ಹರಪನಹಳ್ಳಿಯ ದುಗ್ಗತ್ತಿ ಜಾನ್ ಡಿಸ್ಲರಿ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ,ಓರ್ವ ಮೃತಪಟ್ಟದ್ದು ಮೂವರಿಗೆ ತೀವ್ರ ಗಾಯಗಳಾಗಿವೆ.
ಅಗ್ನಿ ಅವಘಡದಲ್ಲಿ ಮೃತಪಟ್ಟವರನ್ನು ರಘು(40) ಎಂದು ಗುರುತಿಸಲಾಗಿದೆ. ಅಲ್ಲದೆ, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ತೊಡಗಿತ್ತು. ಹಲವಾಗಲು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ
ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
PublicNext
10/01/2021 12:22 pm