ಕಾರವಾರ :ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಪಘಾತವಾಗಿದ್ದು ಅವರ ಧರ್ಮ ಪತ್ನಿ ಅಸುನೀಗಿದ್ದಾರೆ.
ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಶ್ರೀಪಾದ್ ನಾಯಕ್ ಅವರು ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಕೇಂದ್ರ ಸಚಿವ ಪತ್ನಿ ವಿಜಯ ಶ್ರೀಪಾದ್ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಚಿವರು ಸೇರಿ ಮೂವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಕೂಡಲೇ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
11/01/2021 10:40 pm