ಅಂಕೋಲ: ಕೇಂದ್ರ ಆಯುಷ್ ಖಾತೆ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತವಾಗಿ ಸಚಿವರ ಪತ್ನಿ ವಿಜಯಾ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿರುವ ಹಿನ್ನೆಲೆ ಸಿಎಂ ಬಿ,ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಶ್ರೀಪಾದ್ ನಾಯಕ್ ಪತ್ನಿ ವಿಜಯ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಂತಾಪ ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ಹೇಳೀದೆ.
ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ಶ್ರೀ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ
PublicNext
12/01/2021 07:36 am