ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೈಕ್ ಸವಾರ ಪಣೋಲಿಬೈಲು ನಿವಾಸಿ ದಯಾನಂದ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅವರ ತಲೆಗೆ ಏಟಾಗಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕಿನ ಪಣೋಲಿಬೈಲು ಸಮೀಪ ಕಾರಾಜೆ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಬೈಕಿನಿಂದ ಹಾರಿ ಕೆಳಕ್ಕೆ ಬೀಳುವ ದೃಶ್ಯ ಸೆರೆಯಾಗಿದ್ದು, ಅದೀಗ ವೈರಲ್ ಆಗುತ್ತಿದೆ.
PublicNext
12/01/2021 09:48 pm