ಬೆಂಗಳೂರು: ಹಲವಾರು ಕಾರಣಗಳಿಂದ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.
ನಗರದ ಮೈಸೂರು ರೋಡ್ ನ ಸಿರ್ಸಿ ಸರ್ಕಲ್ ಬಳಿ ಐಷಾರಾಮಿ ಕಾರೊಂದು ಅಪಘಾತಕ್ಕೀಡಾಗಿದೆ. ಡ್ರೈವರ್ ಕುಡಿದ ಮತ್ತಿನಲ್ಲಿದ್ದ ಕಾರಣ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಮೈಸೂರು ರೋಡ್ ಫ್ಲೈಓವರ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಘಟನೆ ನಡೆದ ವೇಳೆ ಕಾರಿನಲ್ಲಿದ್ದ ಯುವಕ-ಯುವತಿಗೆ ಗಂಭೀರ ಗಾಯವಾಗಿದೆ. ಆದ್ರೆ ಆಕ್ಸಿಡೆಂಟ್ ಆದ ತಕ್ಷಣ ಅವರಿಬ್ಬರೂ ನಡುರಸ್ತೆಯಲ್ಲೇ ಕಾರು ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆಯಾಗಿವೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಚಿಕ್ಕಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
17/01/2021 07:28 am