ಚಿತ್ರದುರ್ಗ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್ ಗೆ ಹಿಂದಿನಿಂದ ಬಂದ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಸಮೀಪ ನಡೆದಿದೆ.
ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಕುಮಾರ್ (24) ಹಾಗೂ ವಿಜಯ್ (28) ಮೃತ ದುರ್ದೈವಿಗಳು.
ಇಂದು ಬೆಳಗಿನ ಜಾವ ಮೇಟಿಕುರ್ಕೆ ರಾಷ್ಟ್ರೀಯ ಹೆದ್ದಾರಿ ಬಳಿ ಕುಮಾರ್ ಹಾಗೂ ವಿಜಯ್ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದರು. ಈ ವೇಳೆ ಅವರ ಕ್ಯಾಂಟರ್ ಗೆ ವಾಹನ ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಗಾಯಗೊಂಡವರನ್ನ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
17/01/2021 10:26 am