ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತವಾಗಿದ್ದು ಗಾಯಗೊಂಡ ಶಾಸಕರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ರಸ್ತೆಯಲ್ಲಿ ಅಡ್ಡ ಬಂದಿದ್ದ ನಾಯಿಯನ್ನ ತಪ್ಪಿಸುವ ವೇಳೆ ಅಪಘಾತವಾಗಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ.
ಸ್ನೇಹಿತರ ಮನೆಗೆ ಹೋಗಿ ವಾಪಸ್ ಬರುವಾಗ ಅಪಘಾತ ನಡೆದಿದೆ. ಕಾರ್ ನಲ್ಲಿ ಅನಿಲ್ ಲಾಡ್ ಹಾಗೂ ಪತ್ನಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಅನಿಲ್ ಲಾಡ್ ಅವರ ಎರಡೂ ಕೈಗಳಿಗೆ ಗಂಭೀರ ಗಾಯವಾಗಿದ್ದು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
18/01/2021 08:51 pm