ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದ ಪರಿಣಾಮ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ಮಂಗಳವಾರ ನಡೆದಿದೆ. ಈ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರವೀಂದ್ರನ್ ಹಾಗೂ ಕಾರ್ತಿಕ್ ಮೃತ ಪೊಲೀಸ್ ಪೇದೆಗಳು. ಚೆನ್ನೈನ ಮೊಗಪ್ಪೈರ್ ಖಾಸಗಿ ಶಾಲೆಯೊಂದರ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಕಾಲೇಜು ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಕುಡಿದು ವಾಹನ ಚಲಾಯಿಸಿದ ಬಗ್ಗೆ ವರದಿಯಾಗಿಲ್ಲ.
ಆರೋಪಿಗಳಾದ ಅಮರನಾಥ್ (25), ರೋಹಿತ್ ಸೂರ್ಯ (21) ಹಾಗೂ ವರುಣ್ ಸೆಕರ್ (20)ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಹಿಂದಿರುಗುತ್ತಿದ್ದರು. ಅಮರನಾಥ್ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದ ಎನ್ನಲ್ಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಪೊಲೀಸ್ ಪೇದೆಗಳಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪೇದೆಗಳಾದ ರವೀಂದ್ರನ್ ಹಾಗೂ ಕಾರ್ತಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 279 (ರಾಶ್ ಡ್ರೈವಿಂಗ್) ಮತ್ತು 304 (2) (ಕೊಲೆಗೆ ಕಾರಣವಾಗದಿರುವ ಶಿಕ್ಷೆ) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
20/01/2021 06:50 pm