ತೆಲಂಗಾಣ: ನೆರೆಯ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ 7 ಕಾರ್ಮಿಕರು ಮಸಣ ಸೇರಿದ್ದಾರೆ.
ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ. ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟವರೆಲ್ಲರೂ ಕಾರ್ಮಿಕರು ಎನ್ನಲಾಗಿದೆ.
ಘಟನೆಯಲ್ಲಿ ಹದಿಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 20 ಕೃಷಿ ಕಾರ್ಮಿಕರನ್ನು ಆಟೋದಲ್ಲಿ ಕರೆದುಕೊಂಡು ದೇವರಕೊಂಡದಿಂದ ವಾಪಸ್ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ನಲಗೊಂಡ ಎಸ್ ಪಿ ರಂಗನಾಥ್ ವಿವರಣೆ ನೀಡಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
PublicNext
22/01/2021 11:35 am