ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪಘಾತದಲ್ಲಿ ಆರ್ ಎಸ್ ಎಸ್ ಮುಖಂಡ ದೇಶಪಾಂಡೆ ವಿಧಿವಶ

ಬೀದರ್: ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರ್ ಎಸ್ ಎಸ್ ವಿಭಾಗೀಯ ಪ್ರಮುಖ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ 65 ವರ್ಷ ವಯಸ್ಸಿನ ಸುಧಾಕರ್ ದೇಶಪಾಂಡೆ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವ ಸವಾರನಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಸುಧಾಕರ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು.

Edited By : Nagaraj Tulugeri
PublicNext

PublicNext

24/01/2021 07:19 pm

Cinque Terre

217.81 K

Cinque Terre

50

ಸಂಬಂಧಿತ ಸುದ್ದಿ