ಟೊಂಕ್: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 12 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಟೊಂಕ್ ಡಿಜಿಪಿ ತಿಳಿಸಿದ್ದಾರೆ.
PublicNext
27/01/2021 10:32 am