ಮಹಾರಾಷ್ಟ್ರ: ಕಾರು ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಕೊಂಗಾವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/02/2021 10:37 pm