ದಾವಣಗೆರೆ : ರಾಷ್ಟ್ರೀಯ ಹೆದ್ದಾರಿಯಿಂದ ಕಾರೊಂದು ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಗಾಯಗೊಂಡಿದ್ದಾರೆ.ದಾವಣಗೆರೆ ಹೊರವಲಯದ ವಿದ್ಯಾನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಘಟನೆ ಸಂಭವಿಸಿದೆ.
ಕಾರು ಪಲ್ಟಿ ಹೊಡೆದಿದ್ದನ್ನು ಗಮನಿಸಿದ ಸ್ಥಳೀಯರು ಗಾಯಾಳುಗಳನ್ನ ರಕ್ಷಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರು ಕಾರಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ವಿದ್ಯಾನಗರದ ಬನಶಂಕರಿ ಬ್ರಿಡ್ಜ್ ನಲ್ಕಿ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು, ಪಕ್ಕದ ಸರ್ವಿಸ್ ರಸ್ತೆಗೆ ಉರುಳು ಬಿದ್ದಿದೆ. ಅದೃಷ್ಟವಶಾತ್ ಕಾರ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
03/02/2021 01:32 pm