ಪಾಟ್ನಾ: ಬಿಹಾರದ ಚಪ್ರಾ ಜಂಕ್ಷನ್ ರೈಲು ನಿಲ್ದಾಣದ ಬಳಿ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಇಂದು ಸಂಜೆ ಹಳಿ ತಪ್ಪಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ರೈಲು ಸಂಖ್ಯೆ 05101 ವಿಶೇಷ ಲೋಕಮಾನಿಯಾ ತಿಲಕ್ ಎಕ್ಸ್‌ಪ್ರೆಸ್ ರೈಲು ಚಪ್ರಾ ಕೋರ್ಟ್ ನಿಲ್ದಾಣದಿಂದ ಚಪ್ರಾ ಜಂಕ್ಷನ್ ನಿಲ್ದಾಣಕ್ಕೆ ಹೋಗುತ್ತಿತ್ತು. ಈ ವೇಳೆ 65ನೇ ಕ್ರಾಸಿಂಗ್ ಬಳಿ ಹಳಿ ತಪ್ಪಿತು. ರೈಲು ಖಾಲಿಯಾಗಿದ್ದರಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ವರದಿಯಾಗಿಲ್ಲ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರೈಲ್ವೇ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
08/02/2021 10:39 pm