ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕಲ್ಯಾಣನಗರ ಫ್ಲೈಓವರ್ ಮೇಲೆ ಲ್ಯಾಂಡ್ ರೋವರ್ ಕಾರೊಂದು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ವಿಷಯ ತಿಳಿದ ಕೂಡಲೇ ಅಗ್ನಿಶಾಮ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ದುರ್ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಯಿತು. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರದಲ್ಲಿ ದುರ್ಘಟನೆ ನಡೆದಿದೆ.
PublicNext
09/02/2021 07:58 pm