ಬೆಂಗಳೂರು: ಕರ್ನಾಟಕ ರಾಜ್ಯಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.
ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲಿಸಿದ್ದಾರೆ.
PublicNext
19/02/2021 09:06 pm