ದಾವಣಗೆರೆ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಲಾರಿ-ಕಾರು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು, ದಾವಣಗೆರೆಯ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನ ನಡುರಸ್ತೆಯಲ್ಲೇ ಬೆಂಕಿಗೆ ಆಹುತಿಯಾಗಿವೆ.ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/02/2021 03:20 pm