ಹಾವೇರಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಮರಳುವ ವೇಳೆ ಹಾವೇರಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ
ಭಕ್ತರು ಇದ್ದ ವಾಹನ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ.
ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪಡೆಯಲು ಹೋಗಿದ್ದ ಇವರೆಲ್ಲರೂ ಮಹಾರಾಷ್ಟ್ರದವರು ಎನ್ನಲಾಗಿದೆ. ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
PublicNext
25/02/2021 08:23 am