ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ : ಮೂವರ ಸಾವು

ಕರ್ನಲ್ : ಅಚಾನಕ್ಕಾಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ ಮೂವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಕರ್ನಲ್ ನಲ್ಲಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಅತ್ಯಧಿಕ ಪ್ರಮಾಣದಲ್ಲಿ ಇಲ್ಲದಿದ್ದುದರಿಂದ ಭಾರಿ ಅನಾಹುತ ತಪ್ಪಿದೆ. ಆದರೆ ಕೆಲಸ ಮಾಡುತ್ತಿದ್ದ ಮೂವರು ಅಗ್ನಿಗೆ ಆಹುತಿಯಾಗಿದ್ದು, ಕೆಲಸ ನಿರ್ವಹಿಸುತ್ತಿದ್ದ ಕೆಲ ಕೆಲಸಗಾರರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೃತರನ್ನು ಇನ್ನೂ ಗುರುತಿಸಲಾಗಿಲ್ಲ ಮೃತಪಟ್ಟವರ ಕುಟುಂಬಸ್ಥರಿಗೆ ಮಾಹಿತಿ ತಲುಪಿಸಿದ್ದೇವೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

25/02/2021 12:08 pm

Cinque Terre

61.46 K

Cinque Terre

0

ಸಂಬಂಧಿತ ಸುದ್ದಿ