ಬೆಳಗಾವಿ: ಅಕ್ರಮ ಮಣ್ಣು ಗಣಿಗಾರಿಕೆ ಮಾಡುವಾಗ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕನ ಶವವನ್ನು ಸ್ಥಳೀಯರ ನೆರವಿನಿಂದ ಪೊಲೀಸರು ಹೊರತೆಗೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣ್ಣಿನಡಿ ಸಿಲುಕಿದ ಇನ್ನೋರ್ವ ಕಾರ್ಮಿಕನ ಶವಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ.
PublicNext
01/03/2021 06:40 pm