ಕೇರಳ : ನಿತ್ಯ ಎಲ್ಲರಂತೆ ಆಕೆಯು ಸಹೋದರನ ಜೊತೆ ಟೆರೆಸ್ ಮೇಲೆ ವ್ಯಾಯಾಮ ಮಾಡುತ್ತಿದ್ದಾಗ ಆಯತಪ್ಪಿ ಬರೋಬ್ಬರಿ 10 ನೇ ಮಹಡಿಯಿಂದ 18 ವರ್ಷದ ಯುವತಿಯೋರ್ವಳು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ಗುರುವಾರ (ಆ.5) ನಡೆದಿದೆ.
ಆಯತಪ್ಪಿ ಗ್ರೌಂಡ್ ಫ್ಲೋರ್ ನಲ್ಲಿರುವ ಕಾರ್ ಪಾರ್ಕಿಂಗ್ ಜಾಗದಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟೊತ್ತಿಗೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಈ ಕುರಿತು ಪ್ರಕರಣದ ದಾಖಲಿಸಿಕೊಂಡಿರುವ ಎರ್ನಾಕುಲಂನ ದಕ್ಷಿಣ ವಿಭಾಗದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಇದೊಂದು ಆಕಸ್ಮಿಕ ಘಟನೆ ಎಂದು ತಿಳಿದುಬಂದಿರುವುದಾಗಿ ಹೇಳಿದ್ದಾರೆ.
PublicNext
06/08/2021 04:56 pm