ಅಂಕೋಲ(ಉತ್ತರ ಕನ್ನಡ ಜಿಲ್ಲೆ): ಕಾರು ಅಫಘಾತದಲ್ಲಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಎಂಬುವವರು ಅಸುನೀಗಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.
ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತ ಅಧಿಕಾರಿ ಮುದಕಣ್ಣವರ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
PublicNext
08/08/2021 08:21 am