ಬೆಂಗಳೂರು : ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಪುತ್ರ ಮೋಹನ್ ಗೌಡ ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ತಕ್ಷಣ ಅವನ್ನನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಮಗ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ಲೀಲಾವತಿ, ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿ ಸಾವನ್ನಪ್ಪಿದ್ದಾರೆ. ಯುವಕ ಆತ್ಮಹತ್ಯೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಲೀಲಾವತಿ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ವಿಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/08/2021 01:56 pm