ಮುಂಬೈ: ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ತಡೆಗಾಂವ್ ಪಥದ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಮಗುಚಿದ ಕಾರಣ 12 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ನಾಗಪುರ- ಮುಂಬೈ ಸಮೃದ್ಧಿ ಹೆದ್ದಾರಿ ಯೋಜನೆ ಕಾಮಗಾರಿಗಾಗಿ ಒಟ್ಟು 16 ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು. ರಸ್ತೆಯಲ್ಲಿದ್ದ ದೊಡ್ಡ ಗುಂಡಿಯ ಕಾರಣ ವಾಹನ ಮಗುಚಿ ಬಿದ್ದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಚಾರ್ವಿಯಾ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ಬಿಹಾರ ಮತ್ತು ಉತ್ತರ ಪ್ರದೇಶದವರು ಎಂದು ತಿಳಿಸಿದ್ದಾರೆ.
PublicNext
20/08/2021 05:46 pm