ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಟ್ಟದ ಮೇಲೆ ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾಗ ಕಾಲು ಜಾರಿ ಬಿದ್ದು ಪೂಜಾರಿ ಸಾವು.!

ಅಮರಾವತಿ: ಬೆಟ್ಟದ ಮೇಲೆ ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾಗ ಪೂಜಾರಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಭೀಕರ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಅನಂತಪುರ ಜಿಲ್ಲೆಯ ಶಿಂಗನಮಾಲ ಮಂಡಲದ ಗಂಪ ಮಲ್ಲಯ್ಯ ಸ್ವಾಮಿ ಬೆಟ್ಟದಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ದೇವಾಲಯದ ಪೂಜಾರಿ ಅಪ್ಪಾ ಪಾಪಯ್ಯ (49) ಮೃತ ದುರ್ದೈವಿ.

ಪ್ರತಿವರ್ಷದಂತೆ ಗಂಪ ಮಲ್ಲಯ್ಯನಿಗೆ ಪೂಜೆ ಇಂದು ಬೆಳಗ್ಗೆ ಪೂಜೆ ಸಲ್ಲಿಸಲಾಗುತ್ತಿತ್ತು. ಆದರೆ ಪೂಜೆ ಮಾಡುತ್ತಿದ್ದಾಗ ಕಾಲು ಜಾರಿ ಪೂಜಾರಿ ಕೆಳಗೆ ಉರುಳಿ ಬಿದ್ದು ಮೃತಪಟ್ಟಿದ್ದಾರೆ.

Edited By : Nagesh Gaonkar
PublicNext

PublicNext

21/08/2021 06:35 pm

Cinque Terre

149 K

Cinque Terre

10