ಜೈಪುರ : ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.ಬರ್ಮರ್ ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ.
ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದೆ. ಈ ವೇಳೆ ಪೈಲಟ್ ಅನ್ನು ಸುರಕ್ಷಿತವಾಗಿ ಹೊರಗೆ ಎಳೆಯಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.
PublicNext
25/08/2021 09:23 pm