ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ ಬಳಿ ಭೀಕರ ರಸ್ತೆ ಅಪಘಾತ, ಲಾರಿ ರಿಪೇರಿ ಮಾಡುತ್ತಿದ್ದ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಸಾವು

ಉಪ್ಪಿನಂಗಡಿ:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದವರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
PublicNext

PublicNext

30/08/2021 07:37 pm

Cinque Terre

99.47 K

Cinque Terre

1

ಸಂಬಂಧಿತ ಸುದ್ದಿ