ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: MLC ಫಾರೂಖ್ ಫೆರಾರಿ ಕಾರು ರೋಡ್​​ ಡಿವೈಡರ್​​ ಡಿಕ್ಕಿ- ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರು ಅಪಘಾತಕ್ಕೀಡಾಗಿರುವ ಘಟನೆ ಶನಿವಾರ ಯಲಹಂಕ ಮೇಲ್ಸೇತುವೆ ಬಳಿ ನಡೆದಿದೆ.

ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಅವರ ಒಡೆತನದ MH 02 FF 5555 ನಂಬರಿನ ಫೆರಾರಿ ಪೋರ್ಟೋಫಿನೋ ಕಾರು ನಗರದ ಯಲಹಂಕ ಫ್ಲೈ ಓವರ್ ಮೇಲಿನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿರಲಿಲ್ಲ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂಬದಿ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಆ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ನೀಡಿಲ್ಲ. ಇತ್ತ ಅಪಘಾತಕ್ಕೆ ಒಳಗಾದ ಕಾರನ್ನು ಹೆಚ್ಚಾಗಿ ಫಾರೂಖ್ ಪುತ್ರಿ ಬಳಸುತ್ತಿದ್ದರು ಎನ್ನಲಾಗಿದ್ದು, ಘಟನೆ ನಡೆದ ಬಳಿಕ ಪರಸ್ಪರ ರಾಜಿಯೊಂದಿಗೆ ಎರಡು ಕಾರಿನ ಚಾಲಕರು ವಾಪಸ್ ಆಗಿದ್ದಾರೆ ಎನ್ನಲಾಗಿದೆ.

Edited By : Shivu K
PublicNext

PublicNext

06/09/2021 08:44 am

Cinque Terre

107.82 K

Cinque Terre

0

ಸಂಬಂಧಿತ ಸುದ್ದಿ